‘ವೈದ್ಯರು ಹೇಳಿದ ಹಾಗೆ ಜೀವನ ಶೈಲಿಯನ್ನು ಅಳವಡಿಸಿಕೊಂಡರೆ ಪ್ರತಿ ಕಾಯಿಲೆಯನ್ನೂ ನಿಯಂತ್ರಣಕ್ಕೆ ತರಬಹುದು. ನಾನು ಕಳೆದ 30 ವರ್ಷಗಳಿಂದ ಮಧುಮೇಹದಿಂದ ಬಳಲುತ್ತಿದ್ದು, ಈವರೆಗೂ ವೈದ್ಯರು ಹೇಳಿದಂತೆ ಮ್ಯಾನೇಜ್ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹ ಆರೋಗ್ಯ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ವಿಧಾನಸೌಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.