ಜನರ ಆರೋಗ್ಯ ರಕ್ಷಣೆಯಲ್ಲಿ ಪೌರ ಕಾರ್ಮಿಕರ ಕೊಡುಗೆಯೂ ಇದೆ
Sep 26 2024, 09:56 AM ISTಪೌರ ಕಾರ್ಮಿಕರು ವೈಯಕ್ತಿಕ ಆರೋಗ್ಯದ ಬಗ್ಗೆ ನಿಗಾ ವಹಿಸದೆ ಊರಿನ ಸ್ವಚ್ಛತೆಗೆ ಮಹತ್ವ ಕೊಡುತ್ತಾರೆ. ವೇತನ ಕಡಿಮೆ ಕೆಲಸ ಹೆಚ್ಚು ಎನ್ನುವ ಸ್ಥಿತಿಯಲ್ಲಿ ಪೌರ ಕಾರ್ಮಿಕರು ಇದ್ದಾರೆ, ಪೌರ ಕಾರ್ಮಿಕರು ಸೂರ್ಯೋದಕ್ಕಿಂತ ಮುಂಚೆಯೇ ಊರಿನ ಸ್ವಚ್ಛತೆಗೆ ಮುಂದಾಗುತ್ತಾರೆ. ಪಟ್ಟಣದ ಸೌಂದರ್ಯ ಹೆಚ್ಚಿಸುವಲ್ಲಿ, ನಾಗರಿಕರ ಆರೋಗ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರ ಪಾತ್ರ ಪ್ರಮುಖವಾಗಿದ್ದು, ಅವರನ್ನು ಗೌರವಿಸುವುದು ಸರ್ಕಾರ ಮತ್ತು ಸಾರ್ವಜನಿಕರ ಕೆಲಸವಾಗಿದೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತಾಹೀರ ಬೇಗಂ ತಿಳಿಸಿದರು.