ಆರೋಗ್ಯ ಕಾಪಾಡುವ ಪೌರಕಾರ್ಮಿಕ ಸೇವೆ ಅನನ್ಯ
Sep 25 2024, 12:52 AM ISTಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಸ್ವಚ್ಛತೆ, ನೈರ್ಮಲ್ಯ, ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅನನ್ಯವಾಗಿದೆ ಎಂದು ನಾಗಠಾಣದ ಶಾಸಕ ವಿಠ್ಠಲ ಕಟಕದೊಂಡ ಹೇಳಿದರು. ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳ ಸದುಪಯೋಗಪಡಿಸಿಕೊಂಡು ಉತ್ತಮ ಬದುಕು ರೂಪಿಸಿಕೊಳ್ಳಬೇಕು.