ಸಿರಿ ಧಾನ್ಯ ಬಳಕೆಯಿಂದ ಆರೋಗ್ಯ ವೃದ್ಧಿಯಾಗುತ್ತದೆ: ತಮ್ಮಯ್ಯ
Dec 31 2023, 01:30 AM ISTಸಿರಿ ಧಾನ್ಯ ಬೆಳೆಯುವ ರೈತರಿಗೆ ಸರ್ಕಾರ ಪ್ರೋತ್ಸಾಹ ನೀಡುವ ಅವಶ್ಯಕತೆ ಇದೆ. ಗ್ರಾಹಕರೂ ಕೂಡ ಹೆಚ್ಚು ಸಿರಿಧಾನ್ಯ ಬಳಸುವ ಮೂಲಕ ಬೆಳೆಯುವವರಿಗೆ ಉತ್ಸಾಹ ಕೊಡಬೇಕು ಹೆಚ್ಚು ಇಳುವರಿಗಾಗಿ ರಾಸಾಯನಿಕ ಗೊಬ್ಬರ, ಕೀಟ ನಾಶಕ ಬಳಸುತ್ತಿರುವುದರಿಂದ ನಮ್ಮ ಆರೋಗ್ಯದ ಮೇಲೆ ವ್ಯಕ್ತಿರಿಕ್ತ ಪರಿಣಾಮ ಬೀರುತ್ತಿದೆ. ರಾಸಾಯನಿಕ ಮುಕ್ತ ಸಿರಿ ಧಾನ್ಯ ಬಳಸುವುದರಿಂದ ಆರೋಗ್ಯ ವೃದ್ಧಿಸಿ ಕೊಳ್ಳಬಹುದಾಗಿದೆ ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು.