ಹಿಮ್ಸ್ ವತಿಯಿಂದ ವೃದ್ಧಾಶ್ರಮದಲ್ಲಿ ಉಚಿತ ಆರೋಗ್ಯ ಶಿಬಿರ
Oct 08 2024, 01:01 AM ISTಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಹಿಮ್ಸ್)ಯ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಎಕೋ ಕ್ಲಬ್ ವತಿಯಿಂದ ಗವೇನಹಳ್ಳಿಯಲ್ಲಿರುವ ಕಾಮಧೇನು ವೃದ್ಧಾಶ್ರಮದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಆರೋಗ್ಯ ಶಿಬಿರದ ಉದ್ಘಾಟನೆಯನ್ನು ಕಾಮಧೇನು ವೃದ್ಧಾಶ್ರಮದ ಅಧ್ಯಕ್ಷರಾದ ಮಾಧವ ಶೆಣೈ ನೆರವೇರಿಸಿ, ಹಿಮ್ಸ್ ಸಂಸ್ಥೆಯು ಬಡ ಮತ್ತು ಹಿರಿಯ ನಾಗರಿಕರ ಹಿತದೃಷ್ಟಿಯಿಂದ ಇಲ್ಲಿ ಆರೋಗ್ಯ ಶಿಬಿರಗಳನ್ನು ನಡೆಸುತ್ತಿರುವುದರಿಂದ ಹಿರಿಯ ನಾಗರಿಕರಿಗೆ ಅನುಕೂಲವಾಗುತ್ತಿದೆ ಎಂದರು.