ಬಾಣಂತಿಯರ ಮತ್ತು ನವಜಾತ ಶಿಶುಗಳ ಮರಣ ಪ್ರಕರಣ ಸಂಬಂಧ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರನ್ನು ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಜತೆಗೆ ದುರ್ಘಟನೆ ಕುರಿತು ಹೈಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಪ್ರತಿಪಕ್ಷದ ಬಿಜೆಪಿ ಆಗ್ರಹಿಸಿದೆ.
ಅಡಕೆಯ ಆರೋಗ್ಯ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರವೇ ಅಧ್ಯಯನ ನಡೆಸಲು ಹೊರಟಿದೆ. ಸುಮಾರು 10 ಕೋಟಿ ರು. ಮೊತ್ತ ಬಿಡುಗಡೆಗೊಳಿಸಿದ್ದು, ಕಾಸರಗೋಡಿನ ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ ಇದರಡಿ ಕಾಸರಗೋಡಿನ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ ನೇತೃತ್ವ ವಹಿಸಿಕೊಳ್ಳಲಿದೆ