ಕರಾವಳಿಯಲ್ಲಿ ಹಲವರಿಗೆ ಆರೋಗ್ಯ ಸಮಸ್ಯೆ: ಉಷ್ಣಾಂಶ ಏರಿಕೆಯಿಂದ ಡೆಂಘೀ ಆತಂಕ
May 07 2024, 01:00 AM ISTದ.ಕ. ಜಿಲ್ಲೆಯಲ್ಲಿ ಕಳೆದ ಹಲವು ದಶಕಗಳ ತಾಪಮಾನವನ್ನು ಗಮನಿಸಿದಾಗ 32- 33 ಡಿಗ್ರಿ ಸೆ. ಉಷ್ಣಾಂಶ ದಾಖಲಾಗುತ್ತಿತ್ತು. ಈ ಬಾರಿ ತಾಪಮಾನ 36ರಿಂದ 40 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿದೆ. ಬಿಸಿಲಿನಲ್ಲಿ ಹೆಚ್ಚು ಓಡಾಡುತ್ತಿರುವವರಿಗೆ ತಲೆ ನೋವು, ಸುಸ್ತು, ನಿಶ್ಯಕ್ತಿ, ಚರ್ಮ ತುರಿಕೆ, ಜ್ವರ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ತಿಳಿಸಿದ್ದಾರೆ.