ತಿಮ್ಮಾಪುರ ತಪ್ಪು ಮಾಡಿಲ್ಲ: ಆರೋಪ ನಿರಾಧಾರ
Nov 10 2024, 01:40 AM ISTಕನ್ನಡಪ್ರಭ ವಾರ್ತೆ ವಿಜಯಪುರ ಕಳಂಕರಹಿತ ರಾಜಕಾರಣಿಯಾಗಿರುವ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಮೇಲೆ ಬಿಜೆಪಿಯವರು ಭ್ರಷ್ಟಾಚಾರದ ಆರೋಪ ಹೊರಿಸುತ್ತಿದ್ದು, ಅದನ್ನು ನಾವು ಖಂಡಿಸುತ್ತೇವೆ. ಇದು ಸಂಪೂರ್ಣ ಸುಳ್ಳಾಗಿದ್ದು, ಅವರ 35 ವರ್ಷಗಳ ರಾಜಕೀಯ ಜೀವನದಲ್ಲೇ ಎಂದೂ ಭ್ರಷ್ಟಾಚಾರ ಮಾಡಿಲ್ಲ ಎಂದು ಮಾದಿಗ ಸಮಾಜದ ಮುಖಂಡ ಸುಭಾಷ ಕಾಲೇಬಾಗ ಹೇಳಿದರು.