ನೆರೆ ಸಂತ್ರಸ್ತರ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ, ಪ್ರತಿಭಟನೆ
Oct 01 2024, 01:30 AM ISTರಾಣಿಬೆನ್ನೂರು ತಾಲೂಕಿನ ಹೊಸ ಚಂದಾಪುರ ಗ್ರಾಮದಲ್ಲಿ ತುಂಗಭದ್ರಾ ನದಿ ನೆರೆ ಸಂತ್ರಸ್ತರಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಕೂಡಲೇ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಚಿಕ್ಕಕುರುವತ್ತಿ ಗ್ರಾಪಂ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.