ನಾವಂತೂ ಕಾಂಗ್ರೆಸ್ನವರು. ಬಿಜೆಪಿಯವರು ನಮಗೆ ಸಹಾಯ ಮಾಡುತ್ತಾರೆ ಎಂದರೆ, ನಮಗೆ ಅದರ ಬಗ್ಗೆ ಏನೂ ಗೊತ್ತಾಗುತ್ತಿಲ್ಲ. ನಮ್ಮ ಸಿಎಂ ಮಾಡಲು ಅವರು ಯಾರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖಾರವಾಗಿ ಪ್ರಶ್ನಿಸಿದರು.
ಕೊಡಗು ಜಿಲ್ಲೆ ಸೇರಿದಂತೆ ರಾಜ್ಯವ್ಯಾಪಿ ಭಾರಿ ಮಳೆಯಿಂದ ಎದುರಾಗಿರುವ ಪರಿಸ್ಥಿತಿ ನಿರ್ವಹಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲಗೊಂಡಿದ್ದು, ಜಿಲ್ಲೆಯ ಜನರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿಯೂ ಜಿಲ್ಲೆಯ ಶಾಸಕರಿಬ್ಬರು ಸೋತಿದ್ದಾರೆ - ಕೆ.ಜಿ. ಬೋಪಯ್ಯ ಹಾಗೂ ಎಂ.ಪಿ. ಅಪ್ಪಚ್ಚು ರಂಜನ್
‘ಖರ್ಗೆ ಕುಟುಂಬ, ಕೌಟುಂಬಿಕ ರಾಜಕೀಯದಲ್ಲಿ ತೊಡಗಿದೆ’ ಎಂದು ಘನಶ್ಯಾಮ್ ತಿವಾರಿ ನೀಡಿದ ಹೇಳಿಕೆಯನ್ನು ರಾಜ್ಯಸಭೆಯ ಕಡತದಿಂದ ತೆಗೆಸುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆಯ ಸಭಾಧ್ಯಕ್ಷ ಜಗದೀಪ್ ಧನಕರ್ ಅವರಲ್ಲಿ ಭಾವನಾತ್ಮಕವಾಗಿ ಮನವಿ ಮಾಡಿದ ಪ್ರಸಂಗ ನಡೆಯಿತು.
ಈ ಹಿಂದಿನ ಜಿಲ್ಲಾಧಿಕಾರಿಗಳಾಗಿದ್ದ ಡಿ.ಕೆ.ರವಿ ಮತ್ತು ಮನೋಜ್ ಕುಮಾರ್ ಮೀನಾ, ಶಾಸಕರಿಂದ ಸುಮಾರು 47 ಎಕರೆ ಒತ್ತುವರಿಯಾದ ಬಗ್ಗೆ ತನಿಖೆ ನಡೆಸಿ ನೋಟಿಸ್ ಜಾರಿ ಮಾಡಿದ್ದರು. ಈ ಸಂಬಂಧವಾಗಿ ನ್ಯಾಯಾಲಯದ ಮೆಟ್ಟಿಲು ಏರಿದ್ದು ವಿಚಾರಣೆ ಹಂತದಲ್ಲಿದೆ.