2025-26ನೇ ಸಾಲಿನ ಬಜೆಟ್ ಗಾತ್ರ 4 ಲಕ್ಷ ಕೋಟಿ ರು.ಗೂ ಹೆಚ್ಚು. ಬಜೆಟ್ನಲ್ಲಿ ಎಲ್ಲ ಅಲ್ಪಸಂಖ್ಯಾತರಿಗೆ ಕೇವಲ 4,500 ಕೋಟಿ ರು. (ಶೇ.1) ಅನುದಾನ ನೀಡಲಾಗಿದೆ.
ಲೋಕಾಯುಕ್ತ ಪೊಲೀಸರು ಆದಾಯಕ್ಕಿಂತ ಹೆಚ್ಚಿನ ಆದಾಯ ಗಳಿಕೆ ಆರೋಪದ ಮೇಲೆ ಎಂಟು ಭ್ರಷ್ಟ ಅಧಿಕಾರಿಗಳಿಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಿ 64.78 ಲಕ್ಷ ರು. ನಗದು, 3.73 ಕೋಟಿ ರು. ಮೌಲ್ಯದ ಚಿನ್ನಾಭರಣ ಸೇರಿ 36.53 ಕೋಟಿ ರು. ಮೌಲ್ಯದ ಆಸ್ತಿ ಪತ್ತೆ ಹಚ್ಚಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗಕ್ಕೆ ಮೂಗುದಾರ ಹಾಕಲು ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) ಕಾಯ್ದೆ-1959ಕ್ಕೆ ತಿದ್ದುಪಡಿ ತರಲು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಇಬ್ಬರು ಮಹಿಳಾ ಐಪಿಎಸ್ ಅಧಿಕಾರಿಗಳ ನಡುವಿನ ತಿಕ್ಕಾಟ ಮುಂದುವರೆದಿದ್ದು, ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿರುವ ಡಿಐಜಿ ವರ್ತಿಕಾ ಕಟಿಯಾರ್ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಐಜಿಪಿ ಡಿ.ರೂಪಾ ಲಿಖಿತ ದೂರು ನೀಡಿದ್ದಾರೆ.
ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ಉಪಕರಣ ಅಳವಡಿಕೆ ತಪಾಸಣೆ ನೆಪದಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮದ ತಂತ್ರಜ್ಞರ ಬದಲಾಗಿ ಹಣಕಾಸು ವಿಭಾಗದ ನಿರ್ದೇಶಕರೊಬ್ಬರು ತಮ್ಮ ಪತ್ನಿಯನ್ನು ಕರೆದುಕೊಂಡು ವಿದೇಶ ಪ್ರವಾಸ ಹೋಗಿ ಬಂದಿದ್ದಾರೆ ಎಂದು ಆರೋಪಿಸಿರುವ ಬಿಎಂಆರ್ಸಿಎಲ್ ನೌಕರರ ಸಂಘ