ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರ ಮುಕ್ತ ವ್ಯಾಪಾರಕ್ಕೆ ಅಡ್ಡಿ: ಆರೋಪ
May 04 2024, 12:30 AM ISTಎಪಿಎಂಸಿ ಆವರಣದಲ್ಲಿ ಪ್ರತಿ ಬುಧವಾರ ಮತ್ತು ಶನಿವಾರ ವಾರದ ಸಂತೆ ನಡೆಯುತ್ತದೆ. ಸಂತೆ ವ್ಯಾಪಾರಿಗಳ್ಯಾರೂ ಎಪಿಎಂಸಿ ಗೆ ತೆರಿಗೆ ಕಟ್ಟುತ್ತಿಲ್ಲ. ಸಂತೆಯಲ್ಲಿ ಮಾರಾಟಕ್ಕಾಗಿ ರೈತರು ಮುಂಜಾನೆ 5 ಗಂಗೆ ತಾವು ಬೆಳೆದ ಸೊಪ್ಪು, ತರಕಾರಿ, ಕಾಳು ಕಡ್ಡಿಗಳನ್ನು ಮಾರಾಟಕ್ಕೆ ತರುತ್ತಾರೆ. ರೈತರು ಮಾರಾಟಕ್ಕಾಗಿ ತಂದಿಟ್ಟ ಜಾಗವನ್ನು ಖಾಲಿ ಮಾಡುವಂತೆ ಸಂತೆ ವ್ಯಾಪಾರಿಗಳು ಮತ್ತು ದಳ್ಳಾಳಿಗಳು ಬೆದರಿಕೆ ಹಾಕುತ್ತಿದ್ದಾರೆ.