ಆರ್ಯ ಈಡಿಗ ಸಮಾಜ ಅಭಿವೃದ್ಧಿಗೆ ಮಧು ಬಂಗಾರಪ್ಪ ಅಡ್ಡಿ: ಅಜ್ಜಪ್ಪ ಆರೋಪ
Feb 24 2024, 02:38 AM ISTಆರ್ಯ ಈಡಿಗ ಸಮಾಜಕ್ಕೆ ಯಾವುದೇ ಕೊಡುಗೆ ನೀಡದ ಸಚಿವ ಮಧು ಬಂಗಾರಪ್ಪ ಅವರು ಈಗ ಸಮಾಜದ ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿಯಾಗುತ್ತಿದ್ದಾರೆ. ರಾಜ್ಯ ಸರ್ಕಾರದಿಂದ ಮಂಜೂರಾಗಿದ್ದ ₹2 ಕೋಟಿ ಹಣದಲ್ಲಿ ₹1.5 ಕೋಟಿಯನ್ನು ಸಮಾಜಕ್ಕೆ ಬಿಡುಗಡೆಯಾಗಿದೆ. ಆದರೆ, ಈಗ ಸಚಿವ ಮಧು ಬಂಗಾರಪ್ಪ ಅವರು ಸರ್ಕಾರದಿಂದ ಬರಬೇಕಿದ್ದ ಬಾಕಿ ₹50 ಲಕ್ಷ ರು. ಅನುದಾನ ತಡೆಹಿಡಿದಿದ್ದಾರೆ ಎಂದು ಎಂದು ಸೊರಬ ತಾಲೂಕು ಆರ್ಯ ಈಡಿಗ ಸಮಾಜ ಅಧ್ಯಕ್ಷ ಕೆ.ಅಜ್ಜಪ್ಪ ಶಿವಮೊಗ್ಗದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.