ಹೊಸದುರ್ಗ ಸಂಚಾರಿ ನಿರೀಕ್ಷಕರಿಂದ ಸಿಬ್ಬಂದಿಗೆ ಕಿರುಕುಳ ಆರೋಪ

Nov 02 2023, 01:00 AM IST
ಬಿಎಂಟಿಸಿ ಸಿಬ್ಬಂದಿಗೆ ನಿರ್ದಿಷ್ಟ ಮಾರ್ಗ ನೀಡಲು, ಉತ್ತಮ ಗುಣಮಟ್ಟದ ಬಸ್ಸುಗಳನ್ನು ಒದಗಿಸಲು ಹಾಗೂ ರಜೆ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ 7 ಜನರನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಮಾನತು ಮಾಡಿದ ಬೆನ್ನಲ್ಲೇ, ಇಂಥದ್ದೊಂದು ಪ್ರಕರಣಕ್ಕೆ ಪುಷ್ಟಿ ನೀಡುವಂತೆ ಹೊಸದುರ್ಗ ಕೆಎಸ್ಆರ್‌ಟಿಸಿ ಡಿಪೋದಲ್ಲಿ ಲಂಚಾವತಾರದ ಸದ್ದು ಕೇಳಿ ಬಂದಿದೆ. ಇಲ್ಲಿನ ಕೆ.ಎಸ್.ಆರ್.ಟಿ.ಸಿ ಡಿಪೋ ಅಧಿಕಾರಿಯೊಬ್ಬ ಗೂಗಲ್ ಪೇ ಮತ್ತು ಫೋನ್ ಪೇ ಮೂಲಕ ಸಿಬ್ಬಂದಿಯಿಂದ ಲಂಚ ಪಡೆಯುತ್ತಿರುವುದಾಗಿ ಮತ್ತು ಅವರ ಕಿರುಕುಳಕ್ಕೆ ಬೇಸತ್ತು ನಮಗೆ ನ್ಯಾಯ ಒದಗಿಸಿ ಎಂದು ಪರಿಪರಿಯಾಗಿ ಬೇಡಿಕೊಳ್ಳುವ ಸಂದೇಶವೊಂದು ವಾಟ್ಪ್ಸಾ ಗ್ರೂಪ್ ಗಳಲ್ಲಿ ಹರಿದಾಡುತ್ತಿದೆ.