ಕಲಬುರಗಿಯಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಎನ್ನಲಾದ ರಾಜು ಕಪನೂರ್ ಜತೆಗೆ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಇರುವ ಫೋಟೋಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಿಡುಗಡೆ ಮಾಡಿದ್ದಾರೆ.
ಆಂದೋಲಾ ಸ್ಚಾಮೀಜಿ, ಶಾಸಕ ಬಸವರಾಜ ಮತ್ತಿಮಡು, ಬಿಜೆಪಿ ಮುಖಂಡರಾದ ಚಂದು ಪಾಟೀಲ್, ಮಣಿಕಂಠ ರಾಠೋಡ ಕೊಲೆಗೆ ಸಂಚು ರೂಪಿಸಿ ಮಹಾರಾಷ್ಟ್ರ ಮೂಲದ ಗುಂಡಾಗಳಿಗೆ ಸುಪಾರಿ ಕೊಟ್ಟಿದ್ದಾರೆ ಎಂದು ಎಂಎಲ್‌ಸಿ ರವಿಕುಮಾರ್ ಆರೋಪಿಸಿದ್ದಾರೆ.
ಗುತ್ತಿಗೆದಾರ ಸಚಿನ್ ಆತ್ಮಹತ್ಯೆಯಲ್ಲಿ ನನ್ನ ಪಾತ್ರವಿಲ್ಲ. ಈ ಬಗ್ಗೆ ಸಿಐಡಿ ತನಿಖೆ ಆಗಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.