ಮೈಸೂರು ವಿಶ್ವವಿದ್ಯಾಲಯದ ನಂತರ ರಾಜ್ಯದಲ್ಲಿ ಎರಡನೇ ಹಳೆಯ ವಿಶ್ವವಿದ್ಯಾಲಯ ಎಂಬ ಖ್ಯಾತಿಯ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಪ್ರಸ್ತುತ ಹೇಳತೀರದ ಆರ್ಥಿಕ ಸಂಕಷ್ಟದಲ್ಲಿದ್ದು, ಬರುವ ಜೂನ್‌ನಿಂದ ವಿಶ್ವವಿದ್ಯಾಲಯದ 1800 ನಿವೃತ್ತ ನೌಕರರಿಗೆ ಪಿಂಚಣಿ ಸ್ಥಗಿತಗೊಂಡರೂ ಅಚ್ಚರಿ ಇಲ್ಲ!
ಮುಂದಿನ ಆರ್ಥಿಕ ವರ್ಷ(2025-26)ಕ್ಕೆ 5258 ಕೋಟಿ ರು. ಬಜೆಟ್ ಅನ್ನು ತಿರುಮಲ ತಿರುಪತಿ ದೇವಸ್ಥಾನಂ ಸಮಿತಿ ಮಂಡಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬಜೆಟ್ ಗಾತ್ರ 79 ಕೋಟಿ ರು. ಅಧಿಕವಿದೆ. ಅಂತೆಯೇ, ಮುಂದಿನ ವರ್ಷ ಹುಂಡಿಯಿಂದ 1,729 ಕೋಟಿ ರು. ಆದಾಯದ ನಿರೀಕ್ಷೆ ಇದೆ ಎಂದು ಟ್ರಸ್ಟ್ ತಿಳಿಸಿದೆ.
ನಟಿ ರನ್ಯಾ ರಾವ್ ಭಾಗಿಯಾಗಿರುವ ಚಿನ್ನ ಅಕ್ರಮ ಸಾಗಣೆ ಪ್ರಕರಣದಲ್ಲಿ ಜಾಮೀನು ಕೋರಿ ಎರಡನೇ ಆರೋಪಿ ತರುಣ್ ರಾಜು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಬೆಂಗಳೂರು ಆರ್ಥಿಕ ಅಪರಾಧಗಳ ತಡೆ ವಿಶೇಷ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ