ಹೈನುಗಾರಿಕೆ ಕೈಗೊಂಡು ಆರ್ಥಿಕ ಪ್ರಗತಿ ಸಾಧಿಸಲು ಮುಂದಾಗಿ: ಅರುಣ್ ಕುಮಾರ್
Jul 28 2024, 02:08 AM ISTಸರ್ಕಾರ ಜಾರಿಗೆ ತಂದಿರುವ ಅತ್ಮ ಯೋಜನೆಯಲ್ಲಿ ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಪಟ್ಟ ರೈತ ಮಹಿಳೆಯರು ಹಾಗೂ ಪುರುಷರು ತರಬೇತಿ ಶಿಬಿರಗಳಲ್ಲಿ ಭಾಗವಹಿಸಬೇಕು. ಕೃಷಿ ಚಟುವಟಿಕೆಗೆ ಪೂರಕವಾದ ಹೈನುಗಾರಿಕೆ, ಕುರಿ, ಕೋಳಿ, ಮೀನು ಸಾಕಾಣಿಕೆ ಮಾಡಬೇಕು. ಇದರಿಂದ ಆರ್ಥಿಕವಾಗಿ ಪ್ರಗತಿ ಸಾಧಿಸಬಹುದು. ಆಗ ದೇಶವೂ ಪ್ರಗತಿ ಹೊಂದುವುದು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ಚನ್ನಗಿರಿಯಲ್ಲಿ ಹೇಳಿದ್ದಾರೆ.