ಕಂದವಾರ ವಾರ್ಡ್ ನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹೆಸರಿನಲ್ಲಿದ್ದ 19 ಗುಂಟೆ ಜಾಗ ದಾವೂದ್ ಷಾ ವಾಲೀ ದರ್ಗಾ ಸುನ್ನಿ ವಕ್ಫ್ ಸ್ವತ್ತು ಎಂದು ಬದಲಾವಣೆ ಮಾಡಲಾಗಿತ್ತು. 2015- 16 ರಲ್ಲಿ ಪಹಣಿಯಲ್ಲಿ ಶಾಲೆ ಬದಲು ವಕ್ಫ್ ಸ್ವತ್ತು ಎಂದು ನಮೂದಾಗಿದೆ.
ಶ್ರೀ ವನದುರ್ಗಿ ದೇವಾಲಯದ ಆಸ್ತಿಯನ್ನು ವಕ್ಫ್ ಬೋರ್ಡ್‌ನಿಂದ ದೇವಾಲಯದ ಹೆಸರಿಗೆ ಕಂದಾಯ ಇಲಾಖೆ ಮಾಡಿಕೊಡಬೇಕು. ತಪ್ಪಿದಲ್ಲಿ ಬಿಜೆಪಿ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಕೃಷಿಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರತ್‌ಚಂದ್ರ ಎಚ್ಚರಿಸಿದ್ದಾರೆ.
ವಕ್ಫ್ ಆಸ್ತಿ ವಿವಾದದ ಕುರಿತು ಇದೇ ಮೊದಲ ಬಾರಿಗೆ ಕೇಂದ್ರ ಸಚಿವ ಅಮಿತ್ ಶಾ ಪ್ರಸ್ತಾಪ ಮಾಡಿದ್ದಾರೆ. ಜೊತೆಗೆ ಕರ್ನಾಟಕದ ಬೆಳವಣಿಗೆ ಮುಂದಿಟ್ಟುಕೊಂಡು, ಕೇಂದ್ರ ಸರ್ಕಾರ ವಕ್ಫ್ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವುದನ್ನು ಸಮರ್ಥಿಸಿಕೊಂಡಿದ್ದಾರೆ.
ವಕ್ಫ್ ಮಂಡಳಿಯ ಹೆಸರಿನಲ್ಲಿ ರಾಜ್ಯಾದ್ಯಂತ ರೈತರು ಜಮೀನು, ಮಠಮಾನ್ಯಗಳ ಆಸ್ತಿ, ಸರ್ಕಾರಿ ಜಾಗವನ್ನು ವಕ್ಫ್ ಆಸ್ತಿ ಎಂದು ನಮೂದು ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಬಿಜೆಪಿ ನಗರ ಹಾಗೂ ಗ್ರಾಮಾಂತರ ಘಟಕದ ಪದಾಧಿಕಾರಿಗಳು ತಾಲೂಕು ಕಚೇರಿಯ ಬಳಿ ಪ್ರತಿಭಟನೆ ನಡೆಸಿದರು.
ವಕ್ಫ್ ವಿಚಾರವಾಗಿ ಇಲ್ಲಿನ ರೈತರ ಅಹವಾಲು ಕೇಳಬೇಕು ಎಂದು ನಾನು ಬಂದಿದ್ದೇನೆ. ಮುಂಬರುವ ಅಧಿವೇಶದನಲ್ಲಿ ವಕ್ಫ್‌ಗೆ ಸಂಬಂಧಿಸಿದ ಬಿಲ್ ಬರುವುದಿದೆ.