ದೇಶದ ಎಲ್ಲ ರಾಜಕೀಯ ಪಕ್ಷಗಳು, ನಾಯಕರ ಆಸ್ತಿ ತನಿಖೆಯಾಗಲಿ
Oct 19 2023, 12:45 AM ISTಕಾಂಗ್ರೆಸ್ ನಾಯಕರು ಸೇರಿದಂತೆ ಎಲ್ಲ ಪಕ್ಷಗಳು ಹಾಗೂ ನಾಯಕರ ಆಸ್ತಿ ತನಿಖೆಗೆ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆಗ್ರಹಿಸಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಸೇರಿದಂತೆ ಆಯಾ ಪಕ್ಷಗಳ ಘಟಕಗಳ ಹೆಸರಿನಲ್ಲಿರುವ ಆಸ್ತಿಯೂ ತನಿಖೆಯಾಗಬೇಕು. ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರದಲ್ಲಿ ಇರುವುದರಿಂದ ತನಿಖಾ ಕ್ರಮಗಳನ್ನು ಕೈಗೊಳ್ಳಬೇಕು. ಒಂದು ವೇಳೆ ಅನಧಿಕೃತ ಆಸ್ತಿ ಪತ್ತೆಯಾದರೆ ಅಂತಹ ವ್ಯಕ್ತಿಗಳು ಚುನಾವಣೆ ಕಣದಿಂದ ಹೊರ ಹಾಕುವ ಕೆಲಸವಾಗಬೇಕು ಎಂದರು.