ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರ ಆರಂಭಿಸುವಂತೆ ಆಗ್ರಹ

Jul 20 2025, 01:18 AM IST
ಸರ್ಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಶೀಘ್ರವೇ ಆರಂಭಿಸುವಂತೆ ಹಾಗೂ ಹಾಸನ ಜಿಲ್ಲೆಯ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಿ ಜಿಲ್ಲೆಯ ಜನಾರೋಗ್ಯವನ್ನು ಖಾತ್ರಿಪಡಿಸುವಂತೆ ಆಗ್ರಹಿಸಿ ಇನ್ನು ಸಾರ್ವಜನಿಕರಿಗೆ ಸೇವೆ ಸಿಗದ ಹಾಸನದ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಮುಂದೆ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದಿಂದ ಶನಿವಾರ ಪ್ರತಿಭಟನಾ ಸಭೆ ನಡೆಸಿದರು. ಖಾಯಂ ಹುದ್ದೆಗಳು ಖಾಲಿ ಇರುವುದು ಸೇವೆಯ ಮೇಲೆ ಪರಿಣಾಮ ಬೀರುತ್ತಿದೆ. ಸಿಬ್ಬಂದಿ ಮತ್ತು ಸಂಪನ್ಮೂಲಗಳ ಕೊರತೆಯಿಂದಾಗಿ, ಎಲ್ಲಾ ಪಿ.ಎಚ್.ಸಿ. ಗಳಲ್ಲಿ ೨೪x೭ ತುರ್ತು ಮತ್ತು ಹೆರಿಗೆ ಸೇವೆಗಳನ್ನು ಪರಿಣಾಮಕಾರಿಯಾಗಿ ನೀಡುವುದು ಸವಾಲಾಗಿದೆ ಎಂದರು.