ಆಲೂರು ತಾಲೂಕು ಆಸ್ಪತ್ರೆ ವೈದ್ಯರಿಂದ ಪ್ರತಿಭಟನೆ

Aug 18 2024, 01:49 AM IST
ಆಲೂರು ಪಟ್ಟಣದ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ನಿಸಾರ್ ಫಾತಿಮಾರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಇತ್ತೀಚೆಗೆ ವೈದ್ಯೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವುದು ದೇಶದಲ್ಲೇ ತಲೆತಗ್ಗಿಸುವ ಪ್ರಕರಣವಾಗಿದೆ. ಇಡೀ ದೇಶದ ಜನತೆಯ ಆರೋಗ್ಯವನ್ನು ಕಾಪಾಡುವ ವೈದ್ಯರಿಗೆ ರಕ್ಷಣೆ ಇಲ್ಲದಂತಾಗಿದೆ. ಮಹಿಳೆಯರು ನಿರ್ಭೀತಿಯಿಂದ ಕೆಲಸ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಕಿಡಿಗೇಡಿಗಳು ಆಸ್ಪತ್ರೆಗೆ ನುಗ್ಗಿ ಬೆಂಕಿ ಹಚ್ಚಿ ಪಿಠೋಪಕರಣಗಳನ್ನು ಒಡೆದು ಧ್ವಂಸ ಮಾಡಿದ್ದಾರೆ. ಈ ರೀತಿ ಘಟನೆಗಳು ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ವೈದ್ಯರು ಒತ್ತಾಯಿಸಿದರು.