೨೫ ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ಶೀಘ್ರ ನಿರ್ಮಾಣ: ಶಾಸಕ ಕೆ.ವೈ.ನಂಜೇಗೌಡ
Jul 27 2024, 12:53 AM ISTಆಸ್ಪತ್ರೆಗೆ ನೂತನ ಕಟ್ಟಡಕ್ಕಾಗಿ ಸದನದಲ್ಲಿ ಚುಕ್ಕಿ ಪ್ರಶ್ನೆಯ ಮೂಲಕ ಸರ್ಕಾರದ ಗಮನಕ್ಕೆ ತರಲಾಗಿದೆ. ಕಟ್ಟಡದ ಸ್ಥಿತಿ- ಗತಿ, ಅಗತ್ಯವಿರುವ ಕಟ್ಟಡದ ಬಗ್ಗೆ ಇಂಜಿನಿಯರ್ಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಈ ಬಗ್ಗೆ ಸದನದಲ್ಲಿ ಆರೋಗ್ಯ ಸಚಿವರು ಉತ್ತರಿಸಿದ್ದಾರೆ. ಪ್ರತ್ಯೇಕವಾಗಿ ಸಹ ಸಚಿವರನ್ನು ಭೇಟಿ ಮಾಡಿ ಚರ್ಚಿಸಲಾಗಿದೆ, ಆಸ್ಪತ್ರೆ ಕಟ್ಟಡಕ್ಕೆ ಅಗತ್ಯವಿರುವ ಅನುದಾನವನ್ನು ನೀಡಲಾಗುವುದೆಂದು ಸಚಿವರು ತಿಳಿಸಿದ್ದಾರೆ.