ಡೆಂಘೀ ನಿಯಂತ್ರಣಕ್ಕೆ ಹಿಮ್ಸ್ ಆಸ್ಪತ್ರೆ ಸಿದ್ಧ
Jul 05 2024, 12:53 AM ISTಹಾಸನ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಜನವರಿ ಆರಂಭದಿಂದ ಈವರೆಗೆ ೧೬೩೦ ಡೆಂಘೀ ಪ್ರಕರಣಗಳು ಹಿಮ್ಸ್ನಲ್ಲಿ ದಾಖಲಾಗಿದ್ದು, ಈ ಪೈಕಿ ಇಬ್ಬರು ಮಕ್ಕಳು ತಡವಾಗಿ ಆಸ್ಪತ್ರೆಗೆ ದಾಖಲಾದ ಕಾರಣ ಮೃತಪಟ್ಟಿದ್ದಾರೆ. ಡೆಂಘೀ ನಿಯಂತ್ರಣಕ್ಕಾಗಿ ಪ್ರತಿ ೧೫ ದಿನಕ್ಕೊಮ್ಮೆ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಪ್ರಾಥಮಿಕ ಸುರಕ್ಷತಾ ಅಧಿಕಾರಿ, ಆರೋಗ್ಯ ನಿರೀಕ್ಷಕರು ಎಲ್ಲೂ ಕೂಡ ನೀರು ನಿಲ್ಲದಂತೆ ನಿಗಾ ವಹಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಿವಸ್ವಾಮಿ ತಿಳಿಸಿದ್ದಾರೆ.