ಪೌಷ್ಠಿಕ ಆಹಾರ ಸೇವನೆಯಿಂದ ರಕ್ತ ಹೀನತೆ ತಡೆಗಟ್ಟಿ: ಮಹಮ್ಮದ್ ಪಯಾಝ್
Sep 07 2024, 01:38 AM ISTನರಸಿಂಹರಾಜಪುರ, ಪೌಷ್ಠಿಕ ಆಹಾರ ಸೇವನೆಯಿಂದ ರಕ್ತಹೀನತೆ ತಡೆಗಟ್ಟಬಹುದು ಎಂದು ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ಸದಸ್ಯ ಮಹಮ್ಮದ್ ಪಯಾಝ್ ತಿಳಿಸಿದರು.ಬುಧವಾರ ಮುತ್ತಿನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಪೋಷಣ್ ಅಭಿಯಾನ ಮಾಸಾಚರಣೆ ಉದ್ಘಾಟಿಸಿ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವೀಚಾರಕಿ ಕಾವ್ಯ ಮಾತನಾಡಿ, ಪ್ರತಿ ವರ್ಷ ಸೆಪ್ಟಂಬರ್ ತಿಂಗಳಲ್ಲಿ ಪೋಷಣ್ ಮಾಸಾಚರಣೆ ನಡೆಸಲಾಗುತ್ತಿದೆ . ಮೊದಲ ವಾರದಲ್ಲಿ ಸಾರ್ವಜನಿಕರಿಗೆ ರಕ್ತಹೀನತೆ ಬಗ್ಗೆ ಅರಿವು ಮೂಡಿಸ ಲಾಗುತ್ತಿದೆ.