ಅಂಗನವಾಡಿಯಲ್ಲಿ ಸ್ತ್ರೀಶಕ್ತಿ ಸಂಘಗಳೇ ಪೌಷ್ಟಿಕ ಆಹಾರ ತಯಾರಿಸಬೇಕು
Sep 24 2025, 01:00 AM ISTಪ್ರಸ್ತುತ ಪೌಷ್ಟಿಕ ಆಹಾರ ಮದರಾಸಿನಲ್ಲಿ ತಯಾರಾಗುತ್ತಿದ್ದು, ಶಿವಮೊಗ್ಗ ಹಾಗೂ ಬೇಲೂರಿನಲ್ಲಿ ಪ್ಯಾಕ್ ಮಾಡಲಾಗುತ್ತಿದೆ. ಆದರೆ ಶುದ್ಧ ಆಹಾರ ಸ್ಥಳದಲ್ಲಿಯೇ ತಯಾರಾಗಿ ಮಕ್ಕಳಿಗೆ ತಲುಪಬೇಕು. ಈ ಜವಾಬ್ದಾರಿಯನ್ನು ಸ್ಥಳೀಯ ಸ್ತ್ರೀಶಕ್ತಿ ಸಂಘಗಳಿಗೆ ನೀಡಿದರೆ, ಅವರು ಅದನ್ನು ಉತ್ತಮವಾಗಿ ನಿರ್ವಹಿಸುತ್ತಾರೆ. ಇದಕ್ಕಾಗಿ ನಾನು ಸದನದಲ್ಲಿ ಪ್ರಸ್ತಾಪಿಸುತ್ತೇನೆ ಎಂದು ಹೇಳಿದರು. ಅಂಗನವಾಡಿ ಕೇಂದ್ರಗಳು ಸಣ್ಣ ಗ್ರಾಮಗಳಿಗೂ ಮಂಜೂರಾಗುತ್ತಿವೆ. ಅಲ್ಲಿ ಮಕ್ಕಳಿಗೂ ಪೌಷ್ಟಿಕ ಆಹಾರ ಹಾಗೂ ಶಿಕ್ಷಣ ದೊರಕುವಂತೆ ಮಾಡಲು ನಾನು ಪ್ರಯತ್ನಿಸಿದ್ದೇನೆ. ಮಕ್ಕಳ ಸದೃಢ ಆರೋಗ್ಯಕ್ಕಾಗಿ ಈ ಯೋಜನೆ ಅತ್ಯಂತ ಮುಖ್ಯವಾಗಿದೆ. ಮಹಿಳೆಯರು ಕೇವಲ ಅಡಿಗೆಮನೆಗೆ ಸೀಮಿತವಾಗದೆ, ಸಮಾಜಮುಖಿಯಾಗಿ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಕಾರ್ಯದಕ್ಷತೆಯನ್ನು ತೋರಿಸುತ್ತಿದ್ದಾರೆ ಎಂದು ಹೇಳಿದರು.