ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಇಲಾಖೆ ಡಿಡಿಯಿಂದ ಕಿರುಕುಳ
Jan 22 2025, 12:34 AM ISTಸುಮಾರು 490 ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಇಲಾಖೆಯ ಜಂಟಿ ನಿರ್ದೇಶಕರು ವಿನಾಕಾರಣ ನೋಟಿಸ್ ನೀಡುವ ಮೂಲಕ ಪಡಿತರ ಅಂಗಡಿ ಮಾಲೀಕರಿಗೆ ಕಿರುಕುಳ ನೀಡುತ್ತಿದ್ದು, ಅಧಿಕಾರಿಯನ್ನು ಕೂಡಲೇ ಅಮಾನತು ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಸಹಕಾರಿ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಟಿ.ಕೆ. ಕೃಷ್ಣಪ್ಪ ಆಗ್ರಹಿಸಿದರು. ಈ ಹಿಂದೆ ಹಾಸನಕ್ಕೆ ಬರುವ ಮುನ್ನವೇ ಅನೇಕ ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಕೂಡಲೇ ಜಿಲ್ಲಾಧಿಕಾರಿ ಬಗ್ಗೆ ಗಮನಹರಿಸಿ ಜೆಡಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಿಡಿಕಾರಿದರು.