ವ್ಯವಹಾರಿಕ ಜ್ಞಾನ ಬೆಳೆಸಿಕೊಳ್ಳಲು ಆಹಾರ ಮೇಳಗಳು ಪೂರಕ
Jan 10 2025, 12:45 AM ISTವಿದ್ಯಾರ್ಥಿಗಳು ಶಿಕ್ಷಣದ ಜತೆಯಲ್ಲಿಯೇ ವ್ಯವಹಾರಿಕ ಜ್ಞಾನವನ್ನು ಗಳಿಸಬೇಕು. ಈ ನಿಟ್ಟಿನಲ್ಲಿ ಕಾಲೇಜು ಮಟ್ಟದಲ್ಲಿ ಆಯೋಜನೆ ಮಾಡುವ ಆಹಾರ ಮೇಳ ಉತ್ತೇಜಿತವಾಗಿದೆ ಎಂದು ಟೈಮ್ಸ್ ಹಾಸನ ಪಿಯು ಕಾಲೇಜಿನ ಪ್ರಾಂಶುಪಾಲ ನವೀನ್ ಪಿ. ಉಲಿವಾಲ ತಿಳಿಸಿದರು. ವಿದ್ಯಾರ್ಥಿಗಳು ನಿತ್ಯವೂ ನಡೆಯುವ ವ್ಯವಹಾರವನ್ನು ಅವಲೋಕನ ಮಾಡಿದರೆ ಆಹಾರ ಉತ್ಪಾದನೆ, ಬಳಕೆ ಕುರಿತು ಅರಿವನ್ನು ಹೊಂದಬಹುದಾಗಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳ ಕಾರ್ಯಕ್ರಮಗಳಿಗೂ ಒತ್ತು ನೀಡಲಾಗಿದೆ ಎಂದರು.