‘ನಿಮ್ಮ ಬದುಕು, ಆಸ್ತಿ, ಖಾತೆಗಳ ರಕ್ಷಣೆಯೇ ನಮ್ಮ ಗ್ಯಾರಂಟಿ. ಸಾರ್ವಜನಿಕರ ಖಾಸಗಿ ಆಸ್ತಿ ರಕ್ಷಣೆಗೆ ಸರ್ಕಾರವೇ ಜನರ ಮನೆ ಬಾಗಿಲಿಗೆ ಬಂದಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಸ್ವತ್ತುಗಳು ಇ-ಖಾತಾ ಪಡೆದಿರುವುದನ್ನು ಕಡ್ಡಾಯಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಆದೇಶಿಸಿದ್ದಾರೆ.