ಈಶ್ವರಾನಂದಪುರ ಶ್ರೀಗೆ ಅವಮಾನ ಕುರಿತು ಸಿಎಂ ತನಿಖೆಗೆ ಸೂಚಿಸಲಿ: ಈಶ್ವರಪ್ಪ ಆಗ್ರಹ

Feb 04 2024, 01:34 AM IST
ಈಶ್ವರಾನಂದಪುರಿ ಸ್ವಾಮೀಜಿಗೆ ಅವಮಾನ ಆಗಿದ್ದರೆ ಅದು ಹಿಂದು ಸಮಾಜಕ್ಕೆ ಮಾಡಿದ ಅವಮಾನ. ಸ್ವಾಮೀಜಿ ಅವರಿಗೆ ಚನ್ನಕೇಶವ ದೇವಾಲಯದ ಗರ್ಭಗುಡಿಯಲ್ಲಿ ಪೂಜೆ ಮಾಡಿ, ತೆರಳಿದ ನಂತರ ಅಲ್ಲಿನ ಅರ್ಚಕರು ಸ್ವಚ್ಛತೆ ಮಾಡಿದ್ದಾರೆ ಎಂದು ನೋವು ತೋಡಿಕೊಂಡಿರುವುದು ಗಮನಕ್ಕೆ ಬಂದಿದೆ. ಅರ್ಚಕರು ಈ ಬಗ್ಗೆ ಸ್ಪಷ್ಟನೆ ನೀಡಿ, ನಾವು ಈಶ್ವರಾನಂದಪುರಿ ಶ್ರೀಗಳಿಗೆ ಸಕಲ ಗೌರವ ನೀಡಿದ್ದೇವೆ. ಅವರು ಯಾಕೆ ಆ ರೀತಿ ಹೇಳಿಕೆ ನೀಡಿದ್ದಾರೆ ಎಂಬುದು ತಿಳಿಯದು ಎಂದಿದ್ದಾರೆ. ಹಾಗಾದರೆ, ಎಲ್ಲಿ ಗೊಂದಲ ಆಯಿತು ಎಂಬುದು ಬಹಿರಂಗ ಆಗಬೇಕು. ಶ್ರೀಗಳು ಕನಕದಾಸರ ಅನುಯಾಯಿಗಳು ಆಗಿದ್ದು, ಮುಖ್ಯಮಂತ್ರಿ ಅವರು ಈ ಬಗ್ಗೆ ತನಿಖೆ ನಡೆಸಿ ಸತ್ಯಾಂಶ ಬಯಲಿಗೆ ಎಳೆಯಬೇಕು. ಈ ಘಟನೆ ಸತ್ಯವಾಗಿದ್ದರೆ ಸಂಬಂಧಪಟ್ಟವರ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಇದು ಸತ್ಯವಾಗಿಲ್ಲವೆಂದರೆ ಇದಕ್ಕೆ ಕಾರಣವಾದರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದಲ್ಲಿ ಒತ್ತಾಯಿಸಿದ್ದಾರೆ.

ಡಿಕೆಸು, ಡಿಕೆಶಿ ಅವರದು ಜಿನ್ನಾ ಸಂಸ್ಕೃತಿ: ಈಶ್ವರಪ್ಪ ಕಿಡಿ

Feb 03 2024, 01:51 AM IST
ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ ಕೂಗು ಎತ್ತಿರುವ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರದು ಜಿನ್ನಾ ಸಂಸ್ಕೃತಿ. ಕೇಂದ್ರ ಸರ್ಕಾರದಿಂದ ದಕ್ಷಿಣ ರಾಜ್ಯಗಳಿಗೆ ಅನ್ಯಾಯ ಆಗುತ್ತಿದೆ ಎಂದು ಡಿ.ಕೆ.ಸುರೇಶ್‌ ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ ಕೂಗು ಎತ್ತಿದ್ದಾರೆ. ಈ ಹಿಂದೆ ಇದೇ ಕಾಂಗ್ರೆಸ್‌ನವರು ಕೇವಲ ಅಧಿಕಾರಕ್ಕಾಗಿ ಹಿಂದೂಸ್ತಾನ- ಪಾಕಿಸ್ತಾನ ಅಂತಾ ಒಡೆದು ದೇಶವನ್ನು ಎರಡು ಭಾಗ ಮಾಡಿದ್ದರು. ಹಿಂದೂ, ಮುಸ್ಲಿಂ ಎಲ್ಲರೂ ಒಟ್ಟಾಗಿ ಇದ್ದಾಗ ದೇಶ ವಿಭಜನೆ ಆಯ್ತು. ಕಾಂಗ್ರೆಸ್ ನಾಯಕರದ್ದು ಒಂದು ರೀತಿಯ ಜಿನ್ನಾ ಸಂಸ್ಕೃತಿ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಶಿವಮೊಗ್ಗದಲ್ಲಿ ಕಿಡಿಕಾರಿದ್ದಾರೆ.