ಜಾನಪದ ತಜ್ಞ ಡಾ. ಎಂ.ಜಿ. ಈಶ್ವರಪ್ಪ ನಿಧನ
Jun 02 2024, 01:45 AM ISTಜನಪದ ವಿದ್ವಾಂಸ, ಬಾಪೂಜಿ ವಿದ್ಯಾಸಂಸ್ಥೆ ಶೈಕ್ಷಣಿಕ ನಿರ್ದೇಶಕ ಹಾಗೂ ನಿವೃತ್ತ ಪ್ರಾಚಾರ್ಯ, ಜಾನಪದ ತಜ್ಞ ಡಾ. ಎಂ.ಜಿ. ಈಶ್ವರಪ್ಪ ಅವರು ಶನಿವಾರ ಶ್ವಾಸಕೋಶ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಪತ್ನಿ ಬಸಮ್ಮ, ಪುತ್ರ, ಪುತ್ರಿ ಹಾಗೂ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗ ಅಗಲಿದ್ದಾರೆ. ಅಂತ್ಯಕ್ರಿಯೆ ಜೂ.2ರ ಭಾನುವಾರ ದಾವಣಗೆರೆಯಲ್ಲಿ ನಡೆಯಲಿದೆ.