ಮಾರ್ಚ್ 1,2ರಂದು ಉಡುಪಿ ವಕೀಲರ ಸಂಘ ಕ್ರೀಡಾಕೂಟ: ಟ್ರೋಫಿ ಅನಾವರಣ
Feb 25 2025, 12:51 AM ISTಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ 125ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ಎಮ್.ಜಿ.ಎಮ್. ಕಾಲೇಜಿನ ಎ.ಎಲ್.ಎನ್. ರಾವ್ ಕ್ರೀಡಾಂಗಣದಲ್ಲಿ ವಕೀಲರಿಗಾಗಿ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದೆ. ಈ ಪಂದ್ಯಾಕೂಟದ ಟ್ರೋಫಿಯನ್ನು ಉಡುಪಿಯ ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ಅನಾವರಣಗೊಳಿಸಿದರು.