• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಸ್ಟಾರ್ ಮ್ಯೂಸಿಕ್ ಕೋಸ್ಟಲ್ ಸ್ಟುಡಿಯೋಗೆ ಚಾಲನೆ

Apr 01 2024, 12:50 AM IST
ಉಡುಪಿ ಕಡಿಯಾಳಿಯಲ್ಲಿ ‘ಸ್ಟಾರ್ ಮ್ಯೂಸಿಕ್ ಕೋಸ್ಟಲ್ ಸ್ಟುಡಿಯೋ’ ಎಂಬ ಸಂಸ್ಥೆ ಉದ್ಘಾಟನೆಗೊಂಡಿತು. ಕುಂದಾಪುರ ಕಲಾಕ್ಷೇತ್ರದ ಕಿಶೋರ್ ಉದ್ಘಾಟಿಸಿದರು.

ಜ್ಞಾನದ ಉಗಮ ಸ್ಥಾನ ಉಡುಪಿ ಕ್ಷೇತ್ರ: ಪುತ್ತಿಗೆ ಸ್ವಾಮೀಜಿ

Apr 01 2024, 12:49 AM IST
ಶ್ರೀಕೃಷ್ಣ ಮಠದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಆನ್ ಲೈನ್ ವಿಶ್ವ ಗೀತಾ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಿತು. ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠದ ಪೀಠಾಧಿಪತಿ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಸಂದೇಶ ನೀಡಿದರು.

ಉಡುಪಿ ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯ ಈಸ್ಟರ್‌ ಜಾಗರಣೆ

Mar 31 2024, 02:04 AM IST
ಜಿಲ್ಲೆಯ ಎಲ್ಲ ಚರ್ಚ್‌ಗಳಲ್ಲಿ ಪಾಸ್ಕ ಜಾಗರಣೆಯ ಧಾರ್ಮಿಕ ವಿಧಿವಿಧಾನಗಳು ಧರ್ಮಗುರುಗಳು ಹೊಸ ಬೆಂಕಿಯನ್ನು ಆಶೀರ್ವದಿಸುವುದರ ಮೂಲಕ ಆರಂಭಗೊಂಡವು. ಆಶೀರ್ವದಿಸಿದ ಹೊಸ ಬೆಂಕಿಯಿಂದ ಬೃಹತ್‌ ಗಾತ್ರದ ಈಸ್ಟರ್‌ ಕ್ಯಾಂಡಲ್‌ ಹಚ್ಚಿ ಮೆರವಣಿಗೆಯಲ್ಲಿ ಸಾಗಿ ಬಂದು ಚರ್ಚ್‌ನ ಪ್ರಧಾನ ಸ್ಥಳದಲ್ಲಿ ಪ್ರತಿಷ್ಠಾಪಿಸಿದ ಬಳಿಕ ಹಳೆ ಹಾಗೂ ಹೊಸ ಒಡಂಬಡಿಕೆಯ ಆಯ್ದ ಭಾಗಗಳ ವಾಚನ ಮಾಡಲಾಯಿತು

ಉಡುಪಿ ಜಿಲ್ಲಾದ್ಯಂತ ಉಪವಾಸ, ಧ್ಯಾನ, ಪ್ರಾರ್ಥನೆಯೊಂದಿಗೆ ಗುಡ್ ಫ್ರೈಡೆ ಆಚರಣೆ

Mar 30 2024, 12:48 AM IST
ಜಿಲ್ಲೆಯ ಎಲ್ಲ ಚರ್ಚುಗಳಲ್ಲಿ ಬೆಳಗ್ಗೆಯಿಂದಲೇ ಪ್ರಾರ್ಥನೆ, ಧ್ಯಾನ, ಯೇಸುವಿನ ಶಿಲುಬೆಯ ಹಾದಿಯ ವಾಚನ ನಡೆಯಿತು. ಕ್ರೈಸ್ತ ಭಾಂದವರು ದಿನವಿಡೀ ಉಪವಾಸ ಕೈಗೊಂಡು ಯೇಸು ಸ್ವಾಮಿಯನ್ನು ಶಿಲುಬೆಗೇರಿಸುವ ಘಟನಾವಳಿಗಳನ್ನು ಮೆಲುಕು ಹಾಕುವುದರ ಮೂಲಕ ಕಳೆದರು.

ಪ್ರತ್ಯೇಕ ಜಿಲ್ಲೆಯಾಗಿದ್ದರಿಂದ ಉಡುಪಿ ಅಭಿವೃದ್ಧಿಯಾಗಿದೆ: ಜೆ.ಪಿ. ಹೆಗ್ಡೆ

Mar 29 2024, 12:52 AM IST
ಸಭೆಯಲ್ಲಿ ಉಪಸ್ಥಿತರಿದ್ದ ಮಾಜಿ ಸಂಸದ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು ಗೌರವಿಸಲಾಯಿತು. ಬೇರೆ ಪಕ್ಷದಿಂದ ಬಂದ ಮನೋಜ್ ಕರ್ಕೇರ ಅವರಿಗೆ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳಿಸಿದರು.

ಉಡುಪಿ: ಚುನಾವಣಾ ವೆಚ್ಚ ವೀಕ್ಷಕರಾಗಿ ಅಲೋಕ್ ಕುಮಾರ್ ನೇಮಕ

Mar 29 2024, 12:51 AM IST
ಚುನಾವಣಾ ವೆಚ್ಚ ವೀಕ್ಷಕರ ಕಚೇರಿಯನ್ನು ನಗರದ ಬನ್ನಂಜೆಯ ಪ್ರವಾಸಿ ಮಂದಿರದಲ್ಲಿ ತೆರೆಯಲಾಗಿದ್ದು, ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಚುನಾವಣೆಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ದೂರವಾಣಿ ಸಂಖ್ಯೆ: 0820-2001204 ಅಥವಾ ಮೊಬೈಲ್ ಸಂಖ್ಯೆ 9482258424 ಗೆ ಪ್ರತಿದಿನ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಉಡುಪಿ ಜಿಲ್ಲೆಯಲ್ಲಿ ಕ್ರೈಸ್ತರಿಂದ ಪವಿತ್ರ ಗುರುವಾರ ಆಚರಣೆ

Mar 29 2024, 12:49 AM IST
ಧರ್ಮ ಪಾಂತ್ಯದ ಪ್ರಧಾನ ಧಾರ್ಮಿಕ ಕಾರ್ಯಕ್ರಮ ಕಲ್ಯಾಣಪುರ ಮಿಲಾಗ್ರಿಸ್‌ ಕೆಥೆಡ್ರಲ್‌ನಲ್ಲಿ ಉಡುಪಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ವಂ.ಡಾ.ಜೆರಾಲ್ಡ್‌ ಐಸಾಕ್‌ ಲೋಬೊ ನೇತೃತ್ವದಲ್ಲಿ ಆಚರಿಸಲಾಯಿತು. ಧರ್ಮಾಧ್ಯಕ್ಷರು, 12 ಮಂದಿ ವಿಶ್ವಾಸಿಗಳ ಪಾದಗಳನ್ನು ತೊಳೆಯುವ ಮೂಲಕ ಏಸುಕ್ರಿಸ್ತರು ಸಾರಿದ ದೀನತೆ ಹಾಗೂ ಪ್ರಿತಿಯ ಸಂದೇಶವನ್ನು ಸಂಕೇತಿಸಿದರು.

ಉಡುಪಿ ಜಿಲ್ಲೆಯಲ್ಲಿ ಶೇ.100 ಮತದಾನನ ಗುರಿ: ಜಿಪಂ ಸಿಇಒ ಬಾಯಲ್

Mar 29 2024, 12:47 AM IST
ಕುಂದಾಪುರ ತಾಲೂಕು ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮತದಾನದ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು ಹಾಗೂ ಕಡ್ಡಾಯ ಮತದಾನದ ಅರಿವು ಮುಡಿಸುವ ಸಲುವಾಗಿ ಸಹಿ ಸಂಗ್ರಹಣೆ ಮಾಡಲಾಯಿತು.

ಉಡುಪಿ ಬಿಜೆಪಿಯಿಂದ 4 ಮಂಡಲ, 3 ಜಿಲ್ಲಾ ಸಮಾವೇಶಗಳು

Mar 28 2024, 12:52 AM IST
ಆ.3ರಂದು ಬೆಳಗ್ಗೆ 11.30ರಿಂದ 12 ಗಂಟೆ ನಡುವೆ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೆ ಮೊದಲು 10.30ಕ್ಕೆ ಕಡಿಯಾಳಿಯ ಬಿಜೆಪಿ ಕಾರ್ಯಾಲಯದ ಬಳಿ ಉಡುಪಿ ಮಂಡಲ ಮಟ್ಟದ ಸಮಾವೇಶ ನಡೆಯಲಿದೆ.

ಉಡುಪಿ: ಜಿಲ್ಲೆಯ 203 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವದ ಭೀತಿ

Mar 28 2024, 12:51 AM IST
ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ಸರ್ಕಾರಿ ಹಾಗೂ ಖಾಸಗಿ ಒಡೆತನದ 70 ಕೊಳವೆ ಬಾವಿಗಳನ್ನು ಹಾಗೂ 25 ಬಾವಿಗಳನ್ನು ಗುರುತಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಅಭಾವ ಉಂಟಾದಲ್ಲಿ ಖಾಸಗಿ ಬೋರ್‌ವೆಲ್, ಬಾವಿ ಗುರುತಿಸಿ, ಅವುಗಳನ್ನು ಬಾಡಿಗೆಗೆ ತೆಗೆದುಕೊಂಡು ನೀರು ಒದಗಿಸಲಾಗುತ್ತದೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 80
  • next >

More Trending News

Top Stories
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
ನೇಪಾಳ ಆಯ್ತು ಈಗ ಫ್ರಾನ್ಸಲ್ಲೂ ಜನರ ದಂಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved