ಇಂದ್ರಾಳಿ ಸೇತುವೆ ತ್ವರಿತ ಪೂರ್ಣಗೊಳಿಸಿ, ಇಲ್ಲವೇ ಕಾನೂನು ಕ್ರಮ ಎದುರಿಸಿ: ಉಡುಪಿ ಡಿಸಿ
Mar 07 2025, 11:46 PM ISTರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ಪ್ರಗತಿ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಐದಾರು ವರ್ಷಗಳಿಂದ ನಡೆಯುತ್ತಿರುವ ಇಲ್ಲಿನ ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ತಪ್ಪಿದ್ದಲ್ಲಿ ಪರಿಣಾಮ ಎದುರಿಸಿ ಎಂದು ಪುನಃ ಎಚ್ಚರಿಕೆ ನೀಡಿದ್ದಾರೆ.