ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಜಾರಿಗೆ ತರುವ ಮಸೂದೆ ಜಾರಿ ಪ್ರಕ್ರಿಯೆ ಮುಂದೂಡಿರುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ, ರಾಜ್ಯ ರೈತ ಸಂಘ ಸಂಘ ಸೇರಿ ಹಲವು ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶಗೊಂಡಿದ್ದು, ಮಸೂದೆ ಜಾರಿ ಮಾಡದಿದ್ದರೆ ಕನ್ನಡಿಗರ ದಂಗೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿವೆ.
ಖಾಸಗಿ ಕಂಪನಿಗಳಲ್ಲೂ ಕನ್ನಡಿಗರಿಗೆ ಮೀಸಲು ಕಲ್ಪಿಸುವ ಸಂಬಂಧ ಕರ್ನಾಟಕ ಸರ್ಕಾರ ತೆಗೆದುಕೊಂಡ ನಿರ್ಧಾರಕ್ಕೆ ದೇಶದ ಮಾಹಿತಿ ತಂತ್ರಜ್ಞಾನ ವಲಯದ ಪ್ರತಿನಿಧಿಯಾದ ‘ನಾಸ್ಕಾಂ’ ತೀವ್ರ ವಿರೋಧ ವ್ಯಕ್ತಪಡಿಸಿದೆ.