ನಾಗಮಂಗಲ: ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಗೆಲುವು ವಿಜಯೋತ್ಸವ
Nov 24 2024, 01:45 AM ISTರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಜೊತೆಗೆ ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳ ಮತದಾರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಆಶೀರ್ವದಿಸಿದ್ದಾರೆ. ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಾಯಕರಿಗೆ ಈ ಉಪ ಚುನಾವಣೆಯ ಫಲಿತಾಂಶವೇ ತಕ್ಕ ಉತ್ತರವಾಗಿದೆ.