ಬೆಳ್ಳೂರು ಪಟ್ಟಣ ಪಂಚಾಯ್ತಿ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ
Oct 23 2024, 12:36 AM IST13 ಮಂದಿ ಸದಸ್ಯ ಬಲ ಹೊಂದಿರುವ ಬೆಳ್ಳೂರು ಪಟ್ಟಣ ಪಂಚಾಯ್ತಿಯಲ್ಲಿ ಕಾಂಗ್ರೆಸ್ ಬೆಂಬಲಿತ 7 ಮಂದಿ, ಜೆಡಿಎಸ್ನ 4 ಮಂದಿ ಹಾಗೂ ಇಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಆಪ್ತರಾಗಿರುವ ಮಂಜೇಗೌಡ ಉ.ಲ್ಯಾಬ್ ಮಂಜು ಪಕ್ಷೇತರ ಸದಸ್ಯರಾಗಿ ಆಯ್ಕೆಯಾಗಿದ್ದರೂ ಕೂಡ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಮತ್ತೋರ್ವ ಪಕ್ಷೇತರ ಸದಸ್ಯ ರಾಮಲಿಂಗಯ್ಯ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ.