ಇಂದು ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ - ಉಪಾಧ್ಯಕ್ಷರ ಚುನಾವಣೆ
Aug 22 2024, 12:48 AM ISTಚಿಕ್ಕಮಗಳೂರು, ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಗುರುವಾರ ಚುನಾವಣೆ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮಧ್ಯಾಹ್ನ 1 ಗಂಟೆಗೆ ಚುನಾವಣೆ ನಡೆಯಲಿದೆ. ಹಾಗಾಗಿ ಗುರುವಾರ ಬೆಳಿಗ್ಗೆ 8 ಗಂಟೆಗೆ ಚಿಕ್ಕಮಗಳೂರು ನಗರ ಬಿಜೆಪಿ ಕೋರ್ ಕಮಿಟಿ ಸಭೆ ನಡೆದು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಅಭ್ಯರ್ಥಿಗಳ ಆಯ್ಕೆ ಫೈನಲ್ ಆಗಲಿದೆ. ಬಹುಮತ ವಲ್ಲದಿದ್ದರೂ ಕೂಡ ಕಾಂಗ್ರೆಸ್ ಚುನಾವಣಾ ಕಣದಲ್ಲಿ ತನ್ನ ಅಭ್ಯರ್ಥಿಯನ್ನು ನಿಲ್ಲಿಸಲು ತಯಾರಿ ಮಾಡಿಕೊಂಡಿದ್ದು, ಯಾರನ್ನು ಕಣಕ್ಕೆ ಇಳಿಸಬೇಕು ಎಂಬುದು ಗುರುವಾರ ಬೆಳಿಗ್ಗೆ ಕರೆದಿರುವ ಪಕ್ಷದ ಮುಖಂಡರ ಸಭೆಯಲ್ಲಿ ಅಂತಿಮ ತೀರ್ಮಾನ ಆಗಲಿದೆ. ಅಂದರೆ, ಎರಡು ಪಕ್ಷಗಳೂ ಕೂಡ ಕೊನೆಗಳಿಗೆವರೆಗೆ ಗೌಪ್ಯತೆ ಕಾಪಾಡಿಕೊಂಡು ಬರುತ್ತಿವೆ.