ಅಕ್ಟೋಬರ್ 21ರಂದು ವಿಧಾನ ಪರಿಷತ್ ಉಪಚುನಾವಣೆ: ನಿಷೇಧಾಜ್ಞೆ ಜಾರಿ
Oct 19 2024, 12:15 AM ISTಕರ್ನಾಟಕ ವಿಧಾನಪರಿಷತ್ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ಮತದಾನ ನಡೆಯಲಿದ್ದು, ಮುಕ್ತ, ನ್ಯಾಯಯುತ, ಶಾಂತವಾಗಿ ಪ್ರಕ್ರಿಯೆ ನಡೆಸುವ ಉದ್ದೇಶದಿಂದ ಜಿಲ್ಲೆಯಲ್ಲಿ ನಿಗದಿಪಡಿಸಲಾದ ಒಟ್ಟು 158 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಶುಕ್ರವಾರದಿಂದ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.