ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಅತ್ಯಾಚಾರ, ಸುಲಿಗೆ, ಕೊಲೆ, ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಎಲ್ಲಾ ಜೈಲುಗಳು ರೆಸಾರ್ಟ್ ಆಗಿವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.
ಎಚ್.ಡಿ.ಕುಮಾರಸ್ವಾಮಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಹಾಗೂ ಮುರುಗೇಶ್ ನಿರಾಣಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಮನವಿ ಶೀಘ್ರವಾಗಿ ಇತ್ಯರ್ಥಪಡಿಸುವಂತೆ ರಾಜ್ಯಪಾಲರಿಗೆ ಸಲಹೆ ನೀಡುವ ತೀರ್ಮಾನವನ್ನು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.
ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಭಾನುವಾರ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ಭತ್ತ ನಾಟಿ ಮಾಡುವ ಮೂಲಕ ಕೃಷಿಯ ಖುಷಿಯನ್ನು ಅನುಭವಿಸಿದರು.
ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಾಲೂಕಿನ ಅರಳಕುಪ್ಪೆ- ಸೀತಾಪುರ ಗ್ರಾಮದ ಹೊರವಲಯದಲ್ಲಿ ಆ.11ರಂದು ಭತ್ತದ ನಾಟಿ ಮಾಡುವ ಹಿನ್ನೆಲೆಯಲ್ಲಿ ಸಿದ್ಧಗೊಂಡಿರುವ ಜಮೀನನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಶುಕ್ರವಾರ ಪರಿಶೀಲಿಸಿದರು.