ಎಚ್.ಡಿ.ಕುಮಾರಸ್ವಾಮಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಹಾಗೂ ಮುರುಗೇಶ್ ನಿರಾಣಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಮನವಿ ಶೀಘ್ರವಾಗಿ ಇತ್ಯರ್ಥಪಡಿಸುವಂತೆ ರಾಜ್ಯಪಾಲರಿಗೆ ಸಲಹೆ ನೀಡುವ ತೀರ್ಮಾನವನ್ನು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.
ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಭಾನುವಾರ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ಭತ್ತ ನಾಟಿ ಮಾಡುವ ಮೂಲಕ ಕೃಷಿಯ ಖುಷಿಯನ್ನು ಅನುಭವಿಸಿದರು.
ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಾಲೂಕಿನ ಅರಳಕುಪ್ಪೆ- ಸೀತಾಪುರ ಗ್ರಾಮದ ಹೊರವಲಯದಲ್ಲಿ ಆ.11ರಂದು ಭತ್ತದ ನಾಟಿ ಮಾಡುವ ಹಿನ್ನೆಲೆಯಲ್ಲಿ ಸಿದ್ಧಗೊಂಡಿರುವ ಜಮೀನನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಶುಕ್ರವಾರ ಪರಿಶೀಲಿಸಿದರು.
ಪೆನ್‌ಡ್ರೈವ್ ವಿಚಾರ ಹಿಡಿದುಕೊಂಡು ನಾವ್ಯಾರೂ ಬಂದಿಲ್ಲ. ನೀನುಂಟು ನಿನ್ನ ಕುಟುಂಬವುಂಟು ಎಂದು ಸುಮ್ಮನಿದ್ದೆವು. ಪೆನ್‌ಡ್ರೈವ್ ಹಿಂದೆ ಉಪಮುಖ್ಯಮಂತ್ರಿ ಇದ್ದಾರೆ ಎಂದೆಲ್ಲಾ ಹೇಳಿದಿರಿ. ನನ್ನ ಬಗ್ಗೆ ಮಾತನಾಡಲಿಲ್ಲ ಎಂದರೆ ನಿನಗೆ ನಿದ್ರೆ ಬರುವುದಿಲ್ಲ ಎನ್ನುವುದು ತಿಳಿದಿದೆ.
ಸದಾಶಿವನಗರದಲ್ಲಿ ವಿಧವೆಯರ ನಿವೇಶನವನ್ನು ಗನ್ನಿಟ್ಟು ಹೆದರಿಸಿ ರಿಜಿಸ್ಟರ್ ಮಾಡಿಸಿಕೊಂಡ ಅವರು, ಚಾಮುಂಡೇಶ್ವರಿ ಅಥವಾ ನೊಣವಿನಕೆರೆ ಅಜ್ಜಯ್ಯನ ಮುಂದೆ ಬಂದು ಪ್ರಮಾಣ ಮಾಡಲಿ ಎಂದು ಮತ್ತೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆ ಮಾಡಲು ಸಿಬಿಐ, ಇ.ಡಿ. ಸಾಕಾಗುವುದಿಲ್ಲ. ಡಿಕೆಶಿ ನಿಮ್ಮ ಬಳಿ ಏನಿತ್ತು?. ಬ್ಲ್ಯಾಕ್ ಆ್ಯಂಡ್ ವೈಟ್ ಟಿವಿ, ವಿಸಿಆರ್‌ನಿಂದ ಜೀವನ ಪ್ರಾರಂಭಿಸಿದ ನೀವು, ಯಾವ ರೀತಿ ನಡೆದುಕೊಂಡಿದ್ದೀರಿ?. ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ