ಸಿ.ಪಿ.ಯೋಗೇಶ್ವರ್ ೯ ಬಾರಿ ಚುನಾವಣೆ ಎದುರಿಸಿ ಐದು ಬಾರಿ ಶಾಸಕರಾಗಿದ್ದಾರೆ. ಕುಮಾರಸ್ವಾಮಿ ತಮ್ಮ ಮಗನನ್ನು ಚುನಾವಣೆಯಲ್ಲಿ ನಿಲ್ಲಿಸಲು ತಂತ್ರಗಾರಿಕೆ ಮಾಡಿ ಯೋಗೇಶ್ವರ್ ಅವರನ್ನು ಆಚೆ ಕಳಿಸಿದ್ದಾರೆ ಎಂದು ಸಚಿವ ಕುಮಾರಸ್ವಾಮಿ ವಿರುದ್ಧ ಮಾಜಿ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದನ್ನು ಸಹಿಸದೆ ಅವಧಿಗೆ ಮುನ್ನವೇ ಚುನಾವಣೆ ನಡೆಯಲಿದೆ ಎಂದು ಹೇಳುವ ಮೂಲಕ ಜನರನ್ನು ಹಾದಿ ತಪ್ಪಿಸುತ್ತಿದ್ದಾರೆ ಮತ್ತು ಗೊಂದಲ ಸೃಷ್ಟಿಸುತ್ತಿದ್ದಾರೆ. ಅವರು ರಾಜಕೀಯ ಜ್ಯೋತಿಷಿಯೇ ಆಗಿದ್ದರೆ ಭವಿಷ್ಯ ಹೇಳುತ್ತಲೇ ಇರಲಿ.
ಗೌರವಯುತವಾಗಿ ಮನೆಯಲ್ಲಿದ್ದ ನಿಮ್ಮ ಮಡದಿಯನ್ನು ಹೊರಗೆ ತರುವ ಕೆಲಸ ಮಾಡಿದವರು ವಿರೋಧ ಪಕ್ಷದವರಲ್ಲ. ಅದು ನೀವೇ ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ
ಕೆಂಪಣ್ಣ ಆಯೋಗದ ವರದಿಯನ್ನೂ ಸಚಿವ ಸಂಪುಟದಲ್ಲಿಟ್ಟು ಚರ್ಚೆ ಮಾಡಲಿ. ಅದನ್ನು ಏಕೆ ಸಂಪುಟದ ಮುಂದೆ ತಾರದೆ ಬಿಟ್ಟಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.
‘ಕುಮಾರಸ್ವಾಮಿ ಅವರೇ ನೀವು ಸಿದ್ದರಾಮಯ್ಯ ಅವರಿಗಿಂತ ಮೊದಲು ನನ್ನನ್ನು ಎದುರಿಸಿ’ ಎಂದು ವಸತಿ ಸಚಿವ ಜಮೀರ್ ಅಹಮದ್ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕುಟುಂಬದ ಹೆಸರಿನಲ್ಲಿ 97 ಎಕರೆ ಜಮೀನು ಒತ್ತುವರಿಯಾಗಿರುವ ಕುರಿತು ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್. ಹಿರೇಮಠ ಹೈಕೋರ್ಟ್ ನಲ್ಲಿ ದಾವೆ ಹೂಡಿದ್ದಾರೆ.
ಆಸ್ತಿ ವಿಚಾರವಾಗಿ ಹಾದಿಬೀದಿಯಲ್ಲಿ ಮಾತನಾಡುವುದಲ್ಲ, ಸದನದಲ್ಲಿ ದಾಖಲೆ ಸಮೇತ ಚರ್ಚೆಗೆ ಬನ್ನಿ, ಸಾರ್ವಜನಿಕ ಚರ್ಚೆಯೇ ಬೇಕಿದ್ದರೆ ಯಾವುದಾದರೂ ಸುದ್ದಿವಾಹಿನಿಯಲ್ಲಿ ಕೂತು ಚರ್ಚೆಗೆ ನಾನು ಸಿದ್ಧ