‘ಎನ್‌ಡಿಎ ವಿಕಾಸವನ್ನು ಪ್ರತಿನಿಧಿಸಿದರೆ, ಜಂಗಲ್ ರಾಜ್ ನಾಯಕರು (ಆರ್‌ಜೆಡಿ) ವಿನಾಶವನ್ನು ಪ್ರತಿನಿಧಿಸುತ್ತಾರೆ. ಅವರು ಮಾಡಿದ ಪಾಪಕ್ಕೆ ಶಿಕ್ಷೆಯನ್ನು ಅನುಭವಿಸಲೇಬೇಕು. ವಿಧಾನಸಭಾ ಚುನಾವಣೆಯಲ್ಲಿ ಅವರನ್ನು ಸೋಲಿಸಿ, ಶಿಕ್ಷಿಸುವ ಸಮಯ ಬಂದಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ
ಬಿಹಾರದಲ್ಲಿ ವಿಪಕ್ಷ ಇಂಡಿಯಾ ಕೂಟದ ಬೆನ್ನಲ್ಲೇ ಎನ್‌ಡಿಎ ಮೈತ್ರಿಕೂಟವೂ ಭರ್ಜರಿ ಘೋಷಣೆಗಳುಳ್ಳ 69 ಪುಟಗಳ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ 1 ಕೋಟಿ ಉದ್ಯೋಗ ಸೃಷ್ಟಿ ಹಾಗೂ 1 ಕೋಟಿ ಲಖಪತಿ ದೀದಿಯರ ಸೃಷ್ಟಿ ಭರವಸೆಯಿಂದ ಹಿಡಿದು ಮೂಲಸೌಕರ್ಯ ನಿರ್ಮಾಣದ ವರೆಗೆ ಭರವಸೆಗಳನ್ನು ನೀಡಲಾಗಿದೆ.
ಬಿಹಾರ ವಿಧಾನಸಭೆಯ 243 ಕ್ಷೇತ್ರಗಳ ಸೀಟು ಹಂಚಿಕೆ ಸಂಬಂಧ ಮಿತ್ರಪಕ್ಷಗಳಲ್ಲಿ ಉಂಟಾಗಿದ್ದ ಅಸಮಾಧಾನ ಬಗೆಹರಿಸುವಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಯಶಸ್ವಿಯಾಗಿದೆ
ಬಿಹಾರದಲ್ಲಿ ಚುನಾವಣೆ ಘೋಷಣೆ ಆಗುತ್ತಿದ್ದಂತೆಯೇ ಕುತೂಹಲದ ರಾಜಕೀಯ ತಿರುವುಗಳು ಕಂಡುಬರುತ್ತಿವೆ. ಎಲ್‌ಜೆಪಿ (ರಾಮ್‌ವಿಲಾಸ್) ಪಕ್ಷದ ನಾಯಕ ಹಾಗೂ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರು, ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಜನ್ ಸುರಾಜ್ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ