ಜಿಲ್ಲೆ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 15 ಸೂತ್ರ ಸಿದ್ಧ
Dec 05 2023, 01:30 AM ISTಏನಿದು 15 ಅಂಶಗಳ ಯೋಜನೆ?: ಎಸ್ಸೆಸ್ಸೆಲ್ಸಿ ಸುಧಾರಣೆಗೆ ರೂಪಿಸಿರುವ 15 ಅಂಶಗಳ ಸೂತ್ರದಲ್ಲಿ ಮೊದಲನೆಯದು ಜಿಲ್ಲಾಧಿಕಾರಿ, ಜಿಪಂ ಸಿಇಒ , ಎಸ್ಪಿ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಪ್ರೌಢಶಾಲೆಯ ಮುಖ್ಯ ಶಿಕ್ಷಕರ ಸಭೆ ನಡೆಸಿದ್ದು, ಫಲಿತಾಂಶ ಸುಧಾರಣೆಗೆ ಹಾಕಿಕೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ ಮತ್ತು ಅದನ್ನು ಮೇಲುಸ್ತುವಾರಿ ಮಾಡುವ ಬಗ್ಗೆ ಸೂಕ್ತ ನಿರ್ದೇಶನ ನೀಡಲಾಗಿದೆ. ಜೊತೆಗೆ ತಾಲೂಕುವಾರು ಪ್ರೌಢಶಾಲೆಗಳ ಮುಖ್ಯಶಿಕ್ಷಕರ ಸಭೆ ನಡೆಸಿ ಫಲಿತಾಂಶ ಸುಧಾರಣೆಗೆ ಮಾರ್ಗದರ್ಶನ ನೀಡಲಾಗಿದೆ.