ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 20 ಅಂಶ ಯೋಜನೆ
Dec 29 2024, 01:15 AM ISTರಾಮನಗರ: ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಎರಡಂಕಿಯಿಂದ ಒಂದಂಕಿಯೊಳ ತರಲು ಶ್ರಮಿಸುತ್ತಿರುವ ಶಿಕ್ಷಣ ಇಲಾಖೆ, ಅದಕ್ಕಾಗಿ ಹಲವು ವಿನೂತನ ಕಾರ್ಯಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ಶಾಲೆಗಳಲ್ಲಿ 20 ಅಂಶಗಳ ಕಾರ್ಯಕ್ರಮಗಳನ್ನು ಜಾರಿಗೊಳಿಸಿರುವ ಇಲಾಖೆ, ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ಮತ್ತು ಒತ್ತಡ ನಿವಾರಣೆಗೆ ವಿಶೇಷ ಒತ್ತುಕೊಟ್ಟಿದೆ.