ಕಟ್ಟಡ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಅಗತ್ಯ: ಉಮೇಶ್
Jul 16 2024, 12:32 AM ISTರಾಜ್ಯದ ಅಭಿವೃದ್ಧಿಯಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರು ಅತ್ಯಂತ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ರಸ್ತೆ, ಸೇತುವೆ, ರೈಲ್ವೆ, ಬಂದರು, ವಿಮಾನ ನಿಲ್ದಾಣ ಇತ್ಯಾದಿ ನಿರ್ಮಾಣ ಕಾರ್ಯಗಳನ್ನು ಮಾಡುತ್ತಾರೆ. ನಿರ್ಮಾಣ ಕಾರ್ಯದ ವೇಳೆ ಅಪಾಯಕಾರಿ ಹಂತದಲ್ಲಿ ಕೆಲಸಗಳ ನಿರ್ವಹಿಸುವ ಅವರಿಗೆ ಸಾಮಾಜಿಕ ಭದ್ರತೆ ಕಲ್ಪಿಸಬೇಕು ಎಂದು ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಉಪಾಧ್ಯಕ್ಷ ಕಾಂ.ಉಮೇಶ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.