ಕಟ್ಟಡ ಕಾರ್ಮಿಕರಿಗೆ ದೊರಕದ ಮೂಲಭೂತ ಸೌಲಭ್ಯ: ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಪಿ. ಶ್ರೀನಿವಾಸ್
Jun 29 2024, 12:33 AM ISTಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಕಾನೂನು ಬದ್ಧವಾಗಿ ಇದುವರೆಗೂ ಮೂಲಭೂತ ಸೌಲಭ್ಯಗಳು ಸಿಗುತ್ತಿಲ್ಲ. ಈ ಬಗ್ಗೆ ಇಲಾಖೆಯ ಅಧಿಕಾರಿಗಳ ಜೊತೆಗೂ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಜಾರಿ ಮಾಡಿಲ್ಲ, ಶೈಕ್ಷಣಿಕ ಸಹಾಯಧನ, ಮದುವೆ ಸಹಾಯಧನ, ವೈದ್ಯಕೀಯ ಪರಿಹಾರಕ್ಕೆ ಸಲ್ಲಿಕೆಯಾದ ಸಾವಿರಾರು ಅರ್ಜಿಗಳು ಕಳೆದ ಒಂದು ವರ್ಷದಿಂದ ಕೊಳೆಯುತ್ತಿವೆ. ಪಿಂಚಣಿದಾರರ ಪಿಂಚಣಿ ನಿಂತುಹೋಗಿದೆ. ಕಾರ್ಮಿಕರ ಜೀವನ ಸಂಕಷ್ಟಕ್ಕೆ ಸಿಲುಕಿದೆ.