17ರಂದು ಸಂಗೊಳ್ಳಿಯಲ್ಲಿ ವಿವಿಧ ಕಟ್ಟಡ ಉದ್ಘಾಟನೆ
Jan 13 2024, 01:30 AM ISTಜಿಲ್ಲೆಯ ಬೈಲಹೊಂಗಲ ತಾಲೂಕು ಸಂಗೊಳ್ಳಿಯಲ್ಲಿ ಜ.17 ರಂದು ಮಧ್ಯಾಹ್ನ 12ಕ್ಕೆ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ, ಸಂಗೊಳ್ಳಿ ರಾಯಣ್ಣ ಶೌರ್ಯಭೂಮಿ(ಶಿಲ್ಪವನ) ಹಾಗೂ ಸಂಗೊಳ್ಳಿ ರಾಯಣ್ಣ ಸ್ಮಾರಕಭವನ ಮತ್ತು ಭೊಜನಾಲಯ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ. ಬೆಳಗಾವಿ ಜಿಲ್ಲಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಈ ಸಮಾರಂಭ ನಡೆಯಲಿದೆ.