ಅತಿಕ್ರಮಣ ಕಟ್ಟಡ ತೆರವು ಸ್ಥಳಕ್ಕೆ ಡಿಸಿ, ಸಿಇಒ ಭೇಟಿ
Oct 02 2024, 01:05 AM ISTಕನ್ನಡಪ್ರಭ ವಾರ್ತೆ ವಿಜಯಪುರ ನಗರದ ವಾರ್ಡ್ ನಂ.೨೭, ೨೮ ಹಾಗೂ ೩೧ರ ವ್ಯಾಪ್ತಿಯಲ್ಲಿ ಬರುವ ನವಭಾಗ ರಸ್ತೆ, ಒಳಚರಂಡಿ ಮೇಲೆ ಅತಿಕ್ರಮಣ ಮಾಡಿಕೊಂಡು ನಿರ್ಮಿಸಿಕೊಂಡ ಕಟ್ಟಡಗಳನ್ನು ಮಹಾನಗರ ಪಾಲಿಕೆ ವತಿಯಿಂದ ತೆರವುಗೊಳಿಸುತ್ತಿದ್ದು, ಈ ಕಾರ್ಯಾಚರಣೆ ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಭೇಟಿ ನೀಡಿ ಪರಿಶೀಲಿಸಿದರು.