22 ರಂದು ಮಂತ್ರಾಲಯದಲ್ಲಿ ಅಂತಾರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನ
Aug 20 2025, 01:30 AM ISTಚಿಕ್ಕಮಗಳೂರು, ಇದೇ ಮೊದಲ ಬಾರಿಗೆ ಅಂತಾರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕನ್ನಡ ಸಾಹಿತ್ಯ ಪರಿಷತ್ತು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗೋವಾ ಹಾಗೂ ಕರ್ನಾಟಕದ ಚಿಕ್ಕಮಗಳೂರು ಜಿಲ್ಲಾ ಘಟಕಗಳು ಒಳಗೊಂಡಂತೆ ಆ. 22 ರಂದು ನಾಡೋಜ ಡಾ. ಮಹೇಶ್ ಜೋಶಿ ನೇತೃತ್ವದಲ್ಲಿ ಮಂತ್ರಾಲಯದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.