ವಾಣಿಜ್ಯ ಮಳಿಗೆ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಬಳಕೆ ಕಡ್ಡಾಯ: ಡಿಸಿ
Mar 12 2024, 02:01 AM ISTಕನ್ನಡ ಭಾಷಾ ಸಮಗ್ರ ಅಭಿವೃದ್ಧಿಗೆ ಅನುಗುಣವಾಗಿ ರಾಜ್ಯ ಸರ್ಕಾರದ ಇಲಾಖೆಗಳು, ಸಾರ್ವಜನಿಕ ಉದ್ಯಮಗಳು, ಶೈಕ್ಷಣಿಕ ಸಂಸ್ಥೆಗಳು, ಬ್ಯಾಂಕ್‌ಗಳು, ಹೋಟೆಲ್‌ಗಳ ನಾಮಫಲಕಗಳು ಮತ್ತು ಫಲಕದಲ್ಲಿರುವ ಹೆಸರುಗಳು ಹಾಗೂ ಸದರಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಹೆಸರು ಮತ್ತು ಪದನಾಮ ಸೂಚಿಸುವ ಫಲಕಗಳಲ್ಲಿನ ಮೇಲಿನ ಅರ್ಧ ಭಾಗ ಕಡ್ಡಾಯವಾಗಿ ಕನ್ನಡದಲ್ಲಿ ಶೇ. 60, ಇತರೆ ಭಾಷೆ ಶೇ. 40 ಇರತಕ್ಕದ್ದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚನೆ ನೀಡಿದ್ದಾರೆ.